ಮಹಿಳಾ ಪ್ರಧಾನ ಕನ್ನಡ ಚಿತ್ರ ‘ಬ್ರಹ್ಮಕಮಲ’
ನಿರ್ದೇಶಕ ‘ಸಿದ್ದು ಪೂರ್ಣಚಂದ್ರ’ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರ ‘ಬ್ರಹ್ಮಕಮಲ’. ಸಿದ್ದು ಪೂರ್ಣಚಂದ್ರ ಅವರೇ ಈ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ. ಚಿತ್ರದ ಮೊದಲ ನೋಟವನ್ನು ಹೊಸ ವರ್ಷಕ್ಕೆ ಬಿಡುಗಡೆ ಮಾಡಿ...
ನಿರ್ದೇಶಕ ‘ಸಿದ್ದು ಪೂರ್ಣಚಂದ್ರ’ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರ ‘ಬ್ರಹ್ಮಕಮಲ’. ಸಿದ್ದು ಪೂರ್ಣಚಂದ್ರ ಅವರೇ ಈ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ. ಚಿತ್ರದ ಮೊದಲ ನೋಟವನ್ನು ಹೊಸ ವರ್ಷಕ್ಕೆ ಬಿಡುಗಡೆ ಮಾಡಿ ಚಿತ್ರತಂಡ ಹರ್ಷ ವ್ಯಕ್ತಪಡಿಸಿದೆ. ರಾತ್ರಿ ಹುಟ್ಟಿ ರಾತ್ರಿಯೇ ಮುರುಟಿ ಹೋಗುವ ಒಂದು ಮಗುವಿನ ಸುತ್ತ ಘಟಿಸುವ ಕಥೆಯೇ ಬ್ರಹ್ಮ ಕಮಲ. ಈಗಾಗಲೇ ಚಿತ್ರೀಕರಣ ಮುಗಿಸಿ ಸೆನ್ಸಾರ್ ಮಂಡಳಿಯಿಂದ ‘ಯು’ ಸರ್ಟಿಫಿಕೇಟ್ ಪಡೆದುಕೊಂಡಿದೆ. ‘ಬ್ರಹ್ಮಕಮಲ’ ಮಹಿಳಾ ಪ್ರಧಾನ ಚಿತ್ರವಾಗಿದ್ದು, ಅದ್ವಿತಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಲೋಕೇಂದ್ರ ಸೂರ್ಯ, ಋತು ಚೈತ್ರ, ಮಮತಾ ರಾಹುತ್,ಪ್ರಮಿಳಾ ಸುಬ್ರಹ್ಮಣ್ಯ, ಬಲ ರಾಜ್ವಾಡಿ, ಸಿದ್ದು ಪೂರ್ಣಚಂದ್ರ, ಆಟೋ ನಾಗರಾಜ್, ಗಂಡಸಿ ಸದಾನಂದಸ್ವಾಮಿ, ಕವಿತಾ ಕಂಬಾರ್, ರಾಧಾ ರಾಮಚಂದ್ರ ಇನ್ನೂ ಮುಂತಾದವರು ತಾರಾಬಳಗದಲ್ಲಿದ್ದಾರೆ. More Photos and Videos - Adhvithi Shetty More Photos and Videos - Mamatha Rahuth