ಇಬ್ಬನಿಯಲ್ಲಿ ಮಿಂದೆದ್ದ ಮಯೂರಿ

ಇಬ್ಬನಿಯಲ್ಲಿ ಮಿಂದೆದ್ದ ಮಯೂರಿ

'ಗುರುದೇವ ಹೊಯ್ಸಳ', 'ಮ್ಯಾನ್ ಆಫ್ ದಿ ಮ್ಯಾಚ್', 'ಜಮಾಲಿಗುಡ್ಡ' ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಮಯೂರಿ ನಟರಾಜ್‌, ಈಗ ರಕ್ಷಿತ್ ಶೆಟ್ಟಿ ನಿರ್ಮಾಣದ 'ಇಬ್ಬನಿ ತಬ್ಬಿದ .ಇಳೆಯಲಿ' ಚಿತ್ರದ ಭಾಗವಾಗಿದ್ದಾರೆ. ಈ ಚಿತ್ರದಲ್ಲಿ ವಿಹಾನ್...
'ಗುರುದೇವ ಹೊಯ್ಸಳ', 'ಮ್ಯಾನ್ ಆಫ್ ದಿ ಮ್ಯಾಚ್', 'ಜಮಾಲಿಗುಡ್ಡ' ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಮಯೂರಿ ನಟರಾಜ್‌, ಈಗ ರಕ್ಷಿತ್ ಶೆಟ್ಟಿ ನಿರ್ಮಾಣದ 'ಇಬ್ಬನಿ ತಬ್ಬಿದ .ಇಳೆಯಲಿ' ಚಿತ್ರದ ಭಾಗವಾಗಿದ್ದಾರೆ. ಈ ಚಿತ್ರದಲ್ಲಿ ವಿಹಾನ್ ಮತ್ತು ಅಂಕಿತಾ ಅರ್ವ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಈಗ ಮತ್ತೊಬ್ಬ ನಾಯಕಿಯಾಗಿ ಮಯೂರಿ ನಟರಾಜ್ ಎಂಟ್ರಿಯಾಗಿದೆ. ಇದೊಂದು ಪ್ರಮುಖ ಪಾತ್ರವಾಗಿದ್ದು, ಈಗಾಗಲೇ ಮಯೂರಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಮಯೂರಿ ಭಾಗದ ಚಿತ್ರೀಕರಣ ಮುಕ್ತಾಯವಾಗಲಿದೆ. 'ಇಬ್ಬನಿ ತಬ್ಬಿದ ಇಳೆಯಲಿ' ಒಂದು ಕಾವ್ಯಾತ್ಮಕ ಪ್ರೇಮಕಥೆಯಾಗಿದ್ದು, ಮೂರು ವಿಭಿನ್ನ ಕಾಲಘಟ್ಟದಲ್ಲಿ ನಡೆಯುವ ಚಿತ್ರವಾಗಿದೆ. ವಿಹಾನ್ ಮತ್ತು ಅಂಕಿತಾ ಅಮರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ ಮತ್ತು ಶ್ರೀವತ್ಸನ್ ಸೆಲ್ವರಾಜನ್ ಅವರ ಛಾಯಾಗ್ರಹಣವಿದೆ.